




ಬೆಂಗಳೂರು: ಸರ್ಕಾರ ಬದಲಾಗುತ್ತಿದ್ದಂತೆ ಕೆಲಸ ಕಳೆದುಕೊಂಡಿದ್ದ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಮರುನೇಮಕಾತಿ ಮಾಡಿಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಲ್ಲದೇ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದ ನೂತನ ಅವರು ಕೆಲಸ ಕಳೆದುಕೊಂಡಿದ್ದರಲ್ಲಿ ನಮ್ಮ ಸರ್ಕಾರದ ಪಾತ್ರವೇನೂ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಈ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ʻಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಾತ್ಕಾಲಿಕ ನೌಕರರನ್ನು ಕೈಬಿಡುವುದು ಸಾಮಾನ್ಯ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಕೈ ಬಿಡಲಾಗಿದೆʼ ಎಂದು ಹೇಳಿದ್ದಾರೆ.
ನೂತನ ಅವರ ನೇಮಕಾತಿ ವಿಶೇಷ ಪ್ರಕರಣವಾದ್ದರಿಂದ ಮಾನವೀಯತೆಯ ಆಧಾರದಲ್ಲಿ ಅವರನ್ನು ಮರು ನೇಮಕಾತಿ ಮಾಡಿಕೊಳ್ಳಲು ಸಂಬಂಧಿಸಿದವರಿಗೆ ತಿಳಿಸಲಾಗುವುದುʼ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

