ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಾಫ್ಟ್ ವೇರ್ ಆಧಾರಿತ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಸೆಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ.ರಾಮಾನಂದ ಎಚ್.ಎಸ್ ಹಾಗೂ ಹರ್ಷ ಎ.ಜೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಜಿಯೋಜೀಬ್ರಾ ಅಪ್ಲಿಕೇಶನ್ ಮೂಲಕ ಗಣಿತದ ಪರಿಕಲ್ಪನೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ.ರಮಾನಂದ ರವರು ಪ್ರಸ್ತುತ ಸಮಾಜದಲ್ಲಿ ತಂತ್ರಜ್ಞಾನದ ಮಹತ್ವದ ಕುರಿತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಗಣೇಶ್ ನಾಯಕ್ ವಹಿಸಿದ್ದರು. ವಿಭಾಗದ ಪ್ರಾಧ್ಯಾಪಕರಾದ ಅಕ್ಷತಾ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪರ್ಹನ ಪರ್ವೀನ್ ನಿರೂಪಿಸಿದರು.