ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಘೋಷಣೆ

ಶೇರ್ ಮಾಡಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.
ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.
ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

error: Content is protected !!