ಬಾಲಕ, ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶೇರ್ ಮಾಡಿ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಶದ ವಿಳಾಸ https://shp.karnataka.gov.in ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 15-06-2023 ಕೊನೆಯ ದಿನವಾಗಿದ್ದು, ಈ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ತರಗತಿ ಪ್ರಮಾಣ ಪತ್ರ ಅಥವಾ ಪ್ರವೇಶ ರಶೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್‌, ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS ID ಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
5 ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಟುಂಬ ಆದಾಯ ರೂ. ಆರು ಲಕ್ಷ ಮೀರಿರಬಾರದು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‌ ಕಾರ್ಡ್‌ ಸಲ್ಲಿಸುವುದು ಕಡ್ಡಾಯ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿನ ವರ್ಷದ ಅಂಕ ಪಟ್ಟಿಯನ್ನು ಲಗತ್ತಿಸಬೇಕು.
ಮತ್ತು ಇತ್ತಿಚಿನ ಭಾವಚಿತ್ರವನ್ನು ಅಪಲೋಡ್‌ ಮಾಡಬೇಕು.

Leave a Reply

error: Content is protected !!