ಪಡುಬೆಟ್ಟು ಸ.ಹಿ.ಪ್ರಾ ಶಾಲೆ ತಳಿರು ತೋರಣಗಳಿಂದ ಅಲಂಕರಿಸಿ ಪ್ರಾರಂಭೋತ್ಸವ

ಶೇರ್ ಮಾಡಿ

ಪಡುಬೆಟ್ಟು: ದ.ಕ‌.ಜಿ.ಪಂ.ಹಿ.ಪ್ರಾ. ಶಾಲೆ ಪಡುಬೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಶಾಲೆಯಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ನೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ನಡೆಯಿತು‌. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು, ಶ್ರೀಮತಿ ಚಿತ್ರಾ ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಚಂದ್ರ ಪಡುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ಸಲಾಂ ಬಿಲಾಲ್, ಶ್ರೀಮತಿ ಪುಷ್ಪಾ ಹಾಗೂ ಶ್ರೀಮತಿ ಜಯಲಕ್ಷ್ಮಿ ಇವರುಗಳು ಉಪಸ್ಥಿತರಿದ್ದರು.
ಮುಖ್ಯ ಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ. ಇವರು ಸ್ವಾಗತಿಸಿದರು. ಸಹಶಿಕ್ಷಕಿಯಾದ ಶ್ರೀಮತಿ ಕಮಲಾಕ್ಷಿ ಕೆ ಇವರು ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಮಮತಾ ಸಿ.ಹೆಚ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಹಾಜರಿದ್ದು ಸಹಕರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಸಿಹಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Leave a Reply

error: Content is protected !!