ಪುತ್ತೂರಿನ ಒಳಿತು ಮಾಡು ಮನುಷ ತಂಡದ 23ನೇ ಕಾರ್ಯಕ್ರಮ

ಶೇರ್ ಮಾಡಿ

ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 23ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಮೇ.30 ರಂದು ಪುತ್ತೂರಿನ ಸೈನಿಕ ಭವನ ರಸ್ತೆಯಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜನಮೆಚ್ಚಿದ ನಾಯಕ ಅರುಣ್ ಕುಮಾರ್ ಪುತ್ತಿಲ ರವರು ಮಾತನಾಡಿ ಸಮಾಜದಲ್ಲಿರುವ ಅಶಕ್ತರೊಂದಿಗೆ ಸಕ್ರಿಯವಾಗಿ ನಿಲ್ಲಬೇಕು ಅಂತಹ ಕೆಲಸವನ್ನು ಈ ತಂಡವು ಮಾಡುತ್ತಿದೆ. ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಮಾಜದ ಕಣ್ಣಿರನ್ನು ಒರೆಸುವಂತ ಶಕ್ತಿಯನ್ನು ನೀಡಲಿ. ತನು ಮನ ಧನ ಸಹಾಯದೊಂದಿಗೆ ನಾನು ಕೂಡ ನಿಮ್ಮ ಜೊತೆ ಕೈ ಜೋಡಿಸುತ್ತೆನೆಂದು ಹೇಳುತ್ತ ತಂಡಕ್ಕೆ ಶುಭ ಹಾರೈಸಿದರು.

ಇನ್ನೋರ್ವ ಅತಿಥಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಸಾಲ್ಯಾನ್ ರವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗುತಿದೆ. ನಿಮಗೆ ಯಾವಾಗಲೂ ದೇವರ ಅನುಗ್ರಹ ಸಿಗಲಿ ನಾನು ಕೂಡ ನಿಮ್ಮ ಜೊತೆ ಇದ್ದೇನೆ ಎಂದು ಹೇಳುತ್ತ ತಂಡಕ್ಕೆ ಶುಭ ಹಾರೈಸಿದರು.
ಸಂಸ್ಥೆಯ ಕಾನೂನು ಸಲಹೆಗಾರಾರದ ಪುತ್ತೂರಿನ ನ್ಯಾಯವಾದಿ ಹೀರಾಉದಯ್ ರವರು ಮಾತನಾಡಿ ನಾನು ಯಾವಾಗಲೂ ಈ ತಂಡದ ಜೊತೆ ಇದ್ದೇನೆ, ಅರುಣ್ ಕುಮಾರ್ ಪುತ್ತಿಲ ರವರು ನಮ್ಮ ಜೊತೆ ಕೈ ಜೋಡಿಸಿದ್ದಾರೆ ಇದು ನಮ್ಮ ತಂಡಕ್ಕೆ ಒಂದು ಬಲ ಬಂದ ಹಾಗಾಯಿತು. ಈ ಸಂಸ್ಥೆ ಇನ್ನೂ ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ 69,000 ಸಾವಿರ ಮೊತ್ತದ 69 ಆಹಾರ ಕಿಟ್ ವಿತರಣೆ, 56ಜನರಿಗೆ ಬಿಪಿ, ಶುಗರ್ ತಪಾಸಣೆ ಮಾಡಲಾಯಿತು ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತಿರುವ ಬಡಗನ್ನೂರಿನ ಕು.ಅನನ್ಯ ಇವರಿಗೆ ಒಂದು ತಿಂಗಳಿಗೆ ಬೇಕಾಗಿರುವ 2750/- ರೂಪಾಯಿಯ ಔಷಧಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ಶೋಭಾ ಮಡಿವಾಳ, ಸ್ಥಾಪಕ ಅಧ್ಯಕ್ಷರಾದ ಚೇತನ್ ಕುಮಾರ್, ಕಾರ್ಯದರ್ಶಿ ಮೋಹನ್ ಸಿಂಹವನ, ಸಲಹೆಗಾರರಾದ ಪ್ಯಾಟ್ರಿಕ್ ಸಪ್ರಿಯನ್ ಮಸ್ಕರೇನಿಸ್, ಸದಸ್ಯರಾದ ಶ್ರೀಮತಿ ಕಾವ್ಯ, ಶ್ರೀಮತಿ ಸರಸ್ವತಿ, ಕುಮಾರಿ ಚಿತ್ರ ಉಪಸ್ಥಿತರಿದ್ದರು.
ಆಶಾ , ಶೃತಿಕಾ ಪ್ರಾರ್ಥನೆ ನೆರವೇರಿಸಿ, ಗೀತಾ ಸ್ವಾಗತಿಸಿದರು. ಸಂಚಾಲಕರಾದ ಕಲಾವಿದ ಕೃಷ್ಣಪ್ಪ ಶಿವನಗರ ಹಾಗೂ ಕುಮಾರಿ ಸೌಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು

Leave a Reply

error: Content is protected !!