ನೆಲ್ಯಾಡಿ: ಸಂತ ಜಾರ್ಜ್ ಶಿಕ್ಷಣ ಸಂಸ್ಥೆ ಶಾಲಾ ಪ್ರಾರಂಭೋತ್ಸವ; ಸಂಸ್ಕಾರಯುತ ಶಿಕ್ಷಣಕ್ಕೆ ಆದ್ಯತೆ: ಅಬ್ರಹಾಂ ವರ್ಗೀಸ್

ಶೇರ್ ಮಾಡಿ

ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ರೂಢಿಸಿಕೊಳ್ಳಬೇಕು. ಇಂತಹ ಶಿಕ್ಷಣಕ್ಕೆ ನಮ್ಮ ವಿದ್ಯಾಸಂಸ್ಥೆಯಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡುತ್ತೇವೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಯಕರಾಗಲು ಬೇಕಾದ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಅವಕಾಶವನ್ನು ಕಲ್ಪಿಸುತ್ತೇವೆ ಎಂದು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ರವರು ತಿಳಿಸಿದರು.
ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್ ಕುರಿಯಕೋಸ್ ರವರು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್ ಕುರಿಯಕೋಸ್ ರವರು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭಹಾರೈಸಿದರು.
ಶಾಲೆಗೆ ಪ್ರವೇಶಾತಿ ಪಡೆದ 8ನೇ ತರಗತಿ ಹಾಗೂ 9ನೇ ತರಗತಿಯ ನೂತನ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನದೊಂದಿಗೆ ಮೆರವಣಿಗೆಯಲ್ಲಿ ಶಾಲೆಗೆ ಬರಮಾಡಿಕೊಳ್ಳಲಾಯಿತು.

ಕಾಲೇಜ್ ವಿಭಾಗದ ಮುಖ್ಯಸ್ಥರಾದ ಎಂ.ಕೆ ಏಲಿಯಾಸ್, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಎಂ.ಐ ತೋಮಸ್, ಆಂಗ್ಲ ಮಾಧ್ಯಮದ ಮುಖ್ಯ ಗುರುಗಳಾದ ಹರಿಪ್ರಸಾದ್.ಕೆ, ಹಾಗೂ ಉಪನ್ಯಾಸಕ ವೃಂದದವರು, ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

error: Content is protected !!