ಮಂಗಳೂರು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ಜಯರಾಜ್ ಅಮೀನ್ ಅಧಿಕಾರ ಸ್ವೀಕಾರ

ಶೇರ್ ಮಾಡಿ

ಕೊಣಾಜೆ: ಮಂಗಳೂರು ವಿವಿಯಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರ‌ ಕಾರ್ಯಾವಧಿ ಶುಕ್ರವಾರ ಪೂರ್ಣಗೊಂಡಿದ್ದು, ಪ್ರಭಾರ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಕಲಾನಿಕಾಯದ ಡೀನ್ ಆಗಿರುವ ಪ್ರೊ.ಜಯರಾಜ್ ಅಮೀನ್ ಅವರು ಅಧಿಕಾರ ಸ್ವೀಕರಿಸಿದರು.

ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ನೂತನ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.
ಪ್ರೊ.ಜಯರಾಜ್ ಅಮೀನ್ ಅವರು ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ, ವಿಭಾಗದ ಅಧ್ಯಕ್ಷರಾಗಿ, ಕಲಾನಿಕಾಯದ ಡೀನ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಆಡಳಿತ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಪರೀಕ್ಷಾಂಗ ಕುಲಸಚಿವ ಪ್ರೊ.ರಾಜು ಚಲ್ಲನ್ನನವರ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ವಿವಿಯ ವಿವಿಧ ವಿಭಾಗದ ಅಧಿಕಾರಿಗಳು, ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.

Leave a Reply

error: Content is protected !!