ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ; ಷರತ್ತುಗಳೇನು?

ಶೇರ್ ಮಾಡಿ

ಯುವನಿಧಿ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಸರಕಾರ ಶನಿವಾರ ಮಾರ್ಗಸೂಚಿ ಹೊರಡಿಸಿದ್ದು, ಉದ್ಯೋಗ ದೊರೆತ ಬಗ್ಗೆ ಘೋಷಣೆ ಮಾಡದೆ ತಪ್ಪು ಮಾಹಿತಿ ನೀಡಿ ಭತ್ತೆ ಪಡೆಯುವವರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಯೋಜನೆಗೆ ಸಂಬಂಧಪಟ್ಟಂತೆ ಶನಿವಾರ ಅಧಿಕೃತ ಮಾರ್ಗಸೂಚಿಗಳನ್ನು ಹೊರಡಿಸ ಲಾಗಿದೆ. 2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಡೆದವರಿಗೆ, ಪದವಿ/ಡಿಪ್ಲೋಮಾ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇದ್ದರೆ ಈ ಸೌಲಭ್ಯ ಅನ್ವಯವಾಗುತ್ತದೆ.

ಅನ್ನಭಾಗ್ಯಕ್ಕೆ ಆದೇಶ
ಬಿಪಿಎಲ್‌ ಹಾಗೂ ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ ಕುಟುಂಬದ ಸದಸ್ಯರಿಗೆ ಮಾಸಿಕ 10 ಕೆ.ಜಿ. ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ಶನಿವಾರ ಆದೇಶ ಹೊರಡಿಸಲಾಗಿದೆ. ಜುಲೈ 1ರಿಂದ ಅನ್ವಯವಾಗುವಂತೆ ಉಚಿತ ಅಕ್ಕಿ ವಿತರಣೆ ಪ್ರಾರಂಭ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಷರತ್ತುಗಳೇನು?
– ಈ ಸೌಲಭ್ಯ ಕರ್ನಾಟಕದವರಿಗೆ ಮಾತ್ರ ಅನ್ವಯ.
– ಸೌಲಭ್ಯ 2 ವರ್ಷಗಳ ಅವಧಿಗೆ ಮಾತ್ರ ಸೀಮಿತ.
– 2 ವರ್ಷದೊಳಗೆ ಉದ್ಯೋಗ ದೊರೆತರೆ ಘೋಷಣೆ ಮಾಡಬೇಕು.
– ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಡಿಬಿಟಿ ಮೂಲಕ ಹಣ ಹಾಕಲಾಗುತ್ತದೆ.
– ನಿರುದ್ಯೋಗ ಸ್ಥಿತಿಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು.
– ಉದ್ಯೋಗ ಸಿಕ್ಕ ಬಗ್ಗೆ ಮಾಹಿತಿ ನೀಡದಿದ್ದರೆ ದಂಡ.

ಯಾರು ಅರ್ಹರಲ್ಲ?
– ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು.
– ಬೇರೆ ಅಪ್ರಂಟಿಸ್‌ಶಿಪ್‌ ಪಡೆಯುವವರು.
– ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ನಡೆಸುವವರು.

Leave a Reply

error: Content is protected !!