ಚಾರ್ಮಾಡಿ ಘಾಟಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಓರ್ವ ಸಾವು, ಇನ್ನೋರ್ವ ಗಂಭೀರ

ಶೇರ್ ಮಾಡಿ

ಉಜಿರೆ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿ ರಸ್ತೆಯ ಮೂಲಕವಾಗಿ ಹರಪನಹಳ್ಳಿಗೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಚಾರ್ಮಾಡಿ ಕಡೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್‌ ಸವಾರ ಬಾಳೆಹೊನ್ನೂರಿನ ಮಾಗುಂಡಿ ನಿವಾಸಿ ಇರ್ಫಾನ್(21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಬಾಳೆಹೊನ್ನೂರು ನಿವಾಸಿ ಅವಿನ್ (22) ಗಂಭೀರ ಗಾಯಗೊಂಡಿದ್ದು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ
ಚಾರ್ಮಾಡಿ ಘಾಟಿ ಪರಿಸರದಲ್ಲಿ ಸೋಮವಾರ ಬೆಳಗ್ಗಿನಿಂದ ಆಗಾಗ ಮಳೆ ಬೀಳುತ್ತಿದ್ದು ರಸ್ತೆಯು ತೀವ್ರವಾಗಿ ಜಾರುತ್ತಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!