ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಶೇರ್ ಮಾಡಿ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಕೋರಿದರು. ಈ ವೇಳೆ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯಕುಮಾರ್ ಪೆರ್ಲ, ಸದಸ್ಯರಾದ ಪ್ರವೀಣ್ ರಾಜ್ ಕೊಯಿಲ, ಪ್ರಕಾಶ್ ಕೋಡಿಂಬಾಳ, ದಿವಾಕರ ಎಂ ಮತ್ತಿತತರು ಉಪಸ್ಥಿತರಿದ್ದರು.

Leave a Reply

error: Content is protected !!