ಜೂನ್ 30ರಂದು ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ

ಶೇರ್ ಮಾಡಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್​​ನ 3 ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.20 ಕೊನೆಯ ದಿನವಾಗಿದೆ.
ಜೂ.13 ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜೂ.20 ಕೊನೆಯ ದಿನವಾಗಿದೆ. ಜೂ.21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂ.23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.
ಲಕ್ಷ್ಮಣ ಸವದಿ ಹಾಗೂ ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

Leave a Reply

error: Content is protected !!