ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ ವಲಯ ಮತ್ತು ಜೆಸಿಐ ನೆಲ್ಯಾಡಿರವರ ಜಂಟಿ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಪಡುಬೆಟ್ಟುವಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಇಂದು ನಡೆಯಿತು.

ಕಾರ್ಯಕ್ರಮವನ್ನೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುಡ್ಡಪ್ಪರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸೈಂಟ್ ಜಾರ್ಜ್ ಕಾಲೇಜುನ ಉಪನ್ಯಾಸಕರಾದ ಚೇತನ್ ಕುಮಾರ್ ರವರು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು, ಸಭೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕಿನ ಅಧ್ಯಕ್ಷರಾದ ಮಹೇಶ್, ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ಸದಸ್ಯರಾದ ಗಂಗಾಧರ, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಕಮಲ, ಪಡುಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜಾನ್ ಮೊಂತೆರ, ಸೇವಾಪ್ರತಿನಿಧಿ ಮೋಹಿನಿ, ಶಾಲಾ ಶಿಕ್ಷಕರು ಇತರರು ಉಪಸ್ಥಿತರಿದ್ದರು.

ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಪ್ರಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ದೈಹಿಕ ಶಿಕ್ಷಕರಾದ ಕುಶಾಲಪ್ಪರವರು ವಂದಿಸಿದರು

Leave a Reply

error: Content is protected !!