ಬಂಟ್ವಾಳದ ಯುವಕನ ಮೃತದೇಹ ಚಾರ್ಮಾಡಿ ಘಾಟ್ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆ

ಶೇರ್ ಮಾಡಿ

ಬಂಟ್ವಾಳ: ತಾಲೂಕಿನ ಯುವಕನ ಮೃತದೇಹವು ಮೂಡಿಗೆರೆಯ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿ.ಅಬ್ಬಾಸ್ ಎಂಬವರ ಪುತ್ರ ಸವಾದ್ (35) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.
ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು,
ಪೊಲೀಸರಿದ ಶೋಧಕಾರ್ಯ ಮುಂದುವರಿದಿದೆ.

Leave a Reply

error: Content is protected !!