ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಶೇರ್ ಮಾಡಿ

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಇಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು.

ಸರ್ಕಾರದ ಶಕ್ತಿ ಯೋಜನೆಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಪರಿಸರವನ್ನು ಸ್ವಚ್ಛವಾಗಿಡುವಂತೆ ತಿಳಿಸಿದರು. ನಂತರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮೂಲಭೂತ ಸೌಕರ್ಯಗಳ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಜನಪ್ರತಿನಿದಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!