ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿ ವಿಜೇತ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಅವರಿಗೆ ಸನ್ಮಾನ

ಶೇರ್ ಮಾಡಿ

ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿ ವಿಜೇತ ಸಂತ ಜಾರ್ಜ್ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಹಾಗೂ ಶ್ರೀಮತಿ ಸೌಮ್ಯ ದಂಪತಿಗಳಿಗೆ ಜೂ.11 ರಂದು ನೆಲ್ಯಾಡಿ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.

ಕಳೆದ ಒಂದೂವರೆ ವರುಷದಿಂದ ನೆಲ್ಯಾಡಿಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಮೂಲಕ ವಿದ್ಯಾರ್ಥಿಗಳಿಗೆ ಕೀಬೋರ್ಡ್ ಹಾಗೂ ಸುಗಮ ಸಂಗೀತ ತರಬೇತಿಯನ್ನು ನೀಡುತ್ತಿರುವ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಇವರಿಗೆ ಇವರ ಬಹುಮುಖ ಪ್ರತಿಭೆಯ ಸಾಧನೆಗಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿ ಪುರಸ್ಕಾರವನ್ನು ಪಡೆದಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಯ ಪೋಷಕರು, ವಿದ್ಯಾರ್ಥಿಗಳು ಹಾಗೂ ಬಂಧುಗಳು ಉಪಸ್ಥಿತರಿದ್ದರು.

Leave a Reply

error: Content is protected !!