ಮೇಲ್ಮನೆಗೆ ನಾಮಕರಣ: 3 ಸ್ಥಾನಕ್ಕೆ 6 ಮಂದಿ ಅಂತಿಮ

ಶೇರ್ ಮಾಡಿ

ವಿಧಾನ ಪರಿಷತ್‌ನ ಮೂರು ನಾಮಕರಣ ಸದಸ್ಯ ಸ್ಥಾನಗಳಿಗೆ ಕಾಂಗ್ರೆಸ್‌ ಪಕ್ಷವು 6 ಮಂದಿ ಸಂಭವನೀಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಬಳಿಕ ಮೂರು ಮಂದಿ ಒಟ್ಟಿಗೆ ಕುಳಿತು ನಡೆಸಿದ ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನಾಮಕರಣ ಸದಸ್ಯ ಸ್ಥಾನಗಳಿಗೆ ಮಾಜಿ ಸಚಿವರಾದ ಎಂ.ಆರ್‌. ಸೀತಾರಾಂ, ಉಮಾಶ್ರೀ, ಮೇಲ್ಮನೆ ಮಾಜಿ ಸಭಾಪತಿ ಡಾ| ಬಿ.ಎಲ್‌. ಶಂಕರ್‌, ಮೇಲ್ಮನೆ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ತೀರ್ಥಹಳ್ಳಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಂಜುನಾಥ ಗೌಡ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಹೆಸರುಗಳಿವೆ. ಜತೆಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ 3 ಉಪ ಚುನಾವಣೆಗಳಿಗೆ ಸಚಿವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಸಚಿವ ಬೋಸರಾಜು ಹಾಗೂ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ದಿಲ್ಲಿಯಲ್ಲಿ ಮತ್ತೂಂದು ಸುತ್ತಿನ ಸಭೆ ನಡೆದ ಬಳಿಕ ಜೂ. 17 ಇಲ್ಲವೇ 18ರಂದು ಅಧಿಕೃತವಾಗಿ ಪಟ್ಟಿ ಹೊರಬೀಳಲಿದೆ.

Leave a Reply

error: Content is protected !!