ಪುತ್ತೂರು ಶಾಸಕರನ್ನು ಬೇಟಿಯಾದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

ಶೇರ್ ಮಾಡಿ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು ಹಾಗೂ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು..

Leave a Reply

error: Content is protected !!