ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್; ಜಾತಿ ನಿಂದನೆ, ಹಲ್ಲೆ ಪ್ರಕರಣ: ರಂಜಿತ್ ಮದ್ದಡ್ಕ, ಉಮೇಶ್ ಕುಲಾಲ್ ಬಂಧನ

ಶೇರ್ ಮಾಡಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಮೊಬೈಲ್ ಫೋನ್ ಅಂಗಡಿಯ ಉದ್ಯೋಗಿಯ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳಾದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂಬವರನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ)ರವರು ನೀಡಿದ ದೂರಿನಂತೆ ಉಮೇಶ್ ಕುಲಾಲ್, ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ‌ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

error: Content is protected !!