ಜೂ.18 ರಿಂದ ಗೃಹಜ್ಯೋತಿ ನೋಂದಣಿ ಆರಂಭ

ಶೇರ್ ಮಾಡಿ

ಕರ್ನಾಟಕ ಸರ್ಕಾರವು ಗೃಹ ಜ್ಯೋತಿ ಯೋಜನೆಯ ನೋಂದಣಿಯನ್ನು ಜೂನ್ 18, 2023 ರಿಂದ ಪ್ರಾರಂಭಿಸಲು ಸರ್ವಸಿದ್ಧವಾಗಿದೆ.

ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಚಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಬೇಕಾಗಿದೆ. ಈ ತಂತ್ರಾಂಶವನ್ನು ಮೊಬೈಲ್ ಫೋನ್ / ಕಂಪ್ಯೂಟರ್ /ಲ್ಯಾಪ್ ಟ್ಯಾಪ್ ಗಳ ಮೂಲಕವೂ ಸಹ ಬಳಸಬಹುದಾಗಿದೆ.
ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆಗಳ ಮಾಹಿತಿಗಳನ್ನು (ವಿದ್ಯುತ್ ಬಿಲ್‍ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ಸಹ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 24×7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಬಹುದಾಗಿದೆ.

ಗೃಹ ಜ್ಯೋತಿ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‍ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‍ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.

ಈ ಯೋಜನೆಯು ರಾಜ್ಯದಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮವಾಗಿದ್ದು, ಇದರಿಂದ ರಾಜ್ಯದ 2.14 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಈ ಯೋಜನೆಯು 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ಲನ್ನು ಪಡೆಯಲಿದ್ದಾರೆ.

Leave a Reply

error: Content is protected !!