ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಕಾಲೇಜ್ ವಿದ್ಯಾರ್ಥಿ ಸಂಸತ್ ಚುನಾವಣೆ

ಶೇರ್ ಮಾಡಿ

ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ 2023-24ನೇ ಶೈಕ್ಷಣಿಕ ವರ್ಷದ ಕಾಲೇಜ್ ವಿದ್ಯಾರ್ಥಿ ಸಂಸತ್ ಚುನಾವಣೆ ಜೂ.14ರಂದು ನಡೆಯಿತು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಹಾಗೂ ಸಂಚಾಲಕ ಫಾ.ನೋಮಿಸ್ ಕುರಿಯಕೋಸ್ ರವರ ಮಾರ್ಗದರ್ಶನದಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಚುನಾವಣೆ ನಡೆಸಲಾಯಿತು.

ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷರಾಗಿ ಲಿಖಿತ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್.ಪಿ ದ್ವಿತೀಯ ಪಿಯುಸಿ ಕಲಾ ವಿಭಾಗ, ಉಪಾಧ್ಯಕ್ಷರಾಗಿ ಕನ್ನಡ ಮಾಧ್ಯಮ ವಿಭಾಗದಲ್ಲಿ ನಿತೇಶ್ 10ನೇ ತರಗತಿ, ಆಂಗ್ಲ ಮಾಧ್ಯಮ ವಿಭಾಗದಲ್ಲಿ ರಿಯಾನ್ ಫಾಝಿದ್ 10ನೇ ತರಗತಿ, ಕಾರ್ಯದರ್ಶಿಗಳಾಗಿ ಕನ್ನಡ ಮಾಧ್ಯಮ ವಿಭಾಗದಲ್ಲಿ ಪುಣ್ಯಶ್ರೀ 10ನೇ ತರಗತಿ, ಆಂಗ್ಲ ಮಾಧ್ಯಮ ವಿಭಾಗದಲ್ಲಿ ಅನುಷಾ.ಜೆ 10ನೇ ತರಗತಿ ಆಯ್ಕೆಯಾದರು.

ಚುನಾವಣಾಧಿಕಾರಿಗಳಾಗಿ ಕಾಲೇಜ್ ವಿಭಾಗದಲ್ಲಿ ಗೀತಾ ಪಿ.ಬಿ, ಕನ್ನಡ ಮಾಧ್ಯಮದಲ್ಲಿ ವರ್ಗೀಸ್ ಫ್ರಾನ್ಸಿಸ್, ಆಂಗ್ಲ ಮಾಧ್ಯಮದಲ್ಲಿ ಕರುಣಾಕರ ಕರ್ತವ್ಯ ನಿರ್ವಹಿಸಿದರು. ಕಾಲೇಜ್ ವಿಭಾಗದ ಮುಖ್ಯಸ್ಥರಾದ ಎಂ.ಕೆ ಏಲಿಯಾಸ್, ಕನ್ನಡ ಮಾಧ್ಯಮದ ಮುಖ್ಯಗುರುಗಳಾದ ತೋಮಸ್ ಎಂ.ಐ, ಆಂಗ್ಲ ಮಾಧ್ಯಮದ ಮುಖ್ಯಗುರುಗಳಾದ ಹರಿಪ್ರಸಾದ್.ಕೆ ರವರು ಉಪಸ್ಥಿತರಿದ್ದರು. ಎಲ್ಲಾ ಉಪನ್ಯಾಸಕ ವೃಂದದವರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಸಹಕರಿಸಿದರು.

Leave a Reply

error: Content is protected !!