ನೇಸರ ಜ.10: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಸೋಂಕು ದೃಢವಾದ ಬಗ್ಗೆ ಸ್ವತಃ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಖಚಿತ ಪಡಿಸಿದ್ದು,ಯಾವುದೇ ರೋಗಲಕ್ಷಣಗಳಿಲ್ಲ ಎಂದಿದ್ದಾರೆ.ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಹಿಂದೆಯೂ ಒಮ್ಮೆ ಕೋವಿಡ್ ಸೋಂಕು ತಾಗಿತ್ತು.ಇದೀಗ ಎರಡನೇ ಬಾರಿ ಸೋಂಕು ದೃಢವಾಗಿದೆ.
“ನನಗೆ ಕೋವಿಡ್ ದೃಢವಾಗಿದ್ದು,ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.