ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿ ನಿಧನ

ಶೇರ್ ಮಾಡಿ

ಬಂಟ್ವಾಳ : ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಪಾಣೆಮಂಗಳೂರು ಸಮೀಪದ ನರಿಕೊಂಬು ನಾಟಿ ನಿವಾಸಿ ನ್ಯಾಯವಾದಿ ಶ್ರೀನಿವಾಸ ದೈಪಲ ಅವರು ಪುತ್ರ ಶಿಶೀರ್(16)ಮೃತಪಟ್ಟ ಬಾಲಕ.

ಕಳೆದ ವರ್ಷ ಶಿಶೀರ್ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯಲ್ಲಿ ಕುಸಿದು ಬಿದ್ದಿದ್ದ. ಬಳಿಕ ಈತನನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ ಮೆದುಳು ಸಂಬಂಧಿಸಿದ ಕಾಯಿಲೆಯ ಬೆಳಕಿಗೆ ಬಂದಿತ್ತು. ಅಂದಿನಿಂದಲೇ ಕಾಯಿಲೆಗೆ ಚಿಕಿತ್ಸೆ ನಡೆಯುತ್ತಿತ್ತು. ಈ ಮಧ್ಯೆ ಚಿಕಿತ್ಸೆ ನಡೆಯುತ್ತಿರುವ ಸಂದರ್ಭದಲ್ಲಿ ಶಾಲೆಗೆ ಆಗಮಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದರು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಎಸ್.ಎಸ್. ಎಲ್.ಸಿ. ಪರೀಕ್ಷೆ ಬರೆದಿದ್ದು ಪರೀಕ್ಷೆಯಲ್ಲಿ ಶೇ.75 ಅಂಕಗಳನ್ನು ಪಡೆದುಕೊಂಡಿದ್ದ.

ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಪಿ.ಯು.ಸಿ ಗೆ ದಾಖಲಾತಿ ಮಾಡಿರಲಿಲ್ಲ. ಮತ್ತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಶಿಶೀರ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನ ಹೊಂದಿದರು.

Leave a Reply

error: Content is protected !!
%d