ಬೈಕ್‌ ಮತ್ತು ಬಸ್‌ ಮುಖಾಮುಖಿ ಢಿಕ್ಕಿ: ಯುವಕ ಮೃತ್ಯು, ಯುವತಿ ಗಂಭೀರ

ಶೇರ್ ಮಾಡಿ

ತೀರ್ಥಹಳ್ಳಿ : ಬೈಕ್‌ ಮತ್ತು ಬಸ್‌ ಮುಖಾಮುಖಿ ಢಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಭಾನುವಾರ ಆಗುಂಬೆ ಘಾಟಿಯ ಹನ್ನೆರಡನೇ ತಿರುವಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್‌(28) ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!