ಚಾರ್ಮಾಡಿ: ಬಸ್ ತಡೆದು ಗಲಾಟೆ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್..!!

ಶೇರ್ ಮಾಡಿ

ಬೆಳ್ತಂಗಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂದು ಆರೋಪಿಸಿ ಬಸ್ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದ್ದು ಈ ಬಗ್ಗೆ ಬಸ್ಸಿನ ನಿರ್ವಾಹಕ ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿದಲಾಗಿದೆ.

ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತುವ ವೇಳೆ ನಿರ್ವಾಹಕ ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿರುವ ವಿದ್ಯಾರ್ಥಿಗಳು ನಿರ್ವಾಹಕನ ಜತೆ ಗಲಾಟೆ ನಡೆಸಿದ್ದಾರೆ ಬಳಿಕ ಈ ಬಗ್ಗೆ ಚಾರ್ಮಾಡಿಯವರಿಗೆ ಕರೆಮಾಡಿ ಹೇಳಿದ್ದು ಬಸ್ ಚಾರ್ಮಾಡಿ ಚೆಕ್ ಪೋಸ್ಟ್ ಗೆ ತಲುಪುವ ಸಮಯ ಅಲ್ಲಿ ಸ್ಥಳೀಯರು ಜಮಾಯಿಸಿ ಬಸ್ ನ್ನು ನಿಲ್ಲಿಸಿ ಗಲಾಟೆ ಆರಂಭಿಸಲಾಗಿದೆ. ಈ ಸಮಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಆದರೆ ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕ ವಿದ್ಯಾರ್ಥಿಗಳು ಮತ್ತು ಸ್ಥಳೀಯರಲ್ಲಿ ಒಂದಿಷ್ಟು ಖಾರವಾಗಿ ಮಾತನಾಡಿದ್ದು ಸ್ಥಳೀಯರು ಅವರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಚಾಲಕ ನಿರ್ವಾಹಕ ಹಾಗೂ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದೆ.

ಈ ಘಟನೆಯನ್ನು ಸ್ಥಳಿಯರು ಮೊಬೈಲ್ ನಲ್ಲಿ ಚಿತ್ರಕರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಪಿಎಸ್ ಐ ಅನಿಲ್ ಕುಮಾರ್ ಮತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಬಸ್ ಸಿಬಂದಿ, ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಜತೆ ಮಾತನಾಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಚಾರ್ಮಾಡಿಯಿಂದ ಒಂದೂವರೆ ಗಂಟೆಯಷ್ಟು ಕಾಲ ತಡವಾಗಿ ಬಸ್ ಮೂಡಿಗೆರೆಯತ್ತ ಪ್ರಯಾಣ ಬೆಳೆಸಿತು.
ಪ್ರಕರಣ ದಾಖಲು: ಘಟನೆಯ ಬಗ್ಗೆ ಬಸ್ ನಿರ್ವಾಹಕ ಶಿವಕುಮಾರ್ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
.

Leave a Reply

error: Content is protected !!