ಕಾರಿನಲ್ಲಿ ಅಕ್ರಮ ಗೋ ಸಾಗಾಟ;ಇಬ್ಬರು ಆರೋಪಿಗಳು ಪರಾರಿ

ಶೇರ್ ಮಾಡಿ

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ.

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಷ್ ಸಹಿತ ಕಾರ್ಯಕರ್ತರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!