ನೆಲ್ಯಾಡಿ: ಬೈಕ್ ಡಿಕ್ಕಿ – ಗಾಯಾಳು ಮೃತ್ಯು

ಶೇರ್ ಮಾಡಿ

ನೆಲ್ಯಾಡಿ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆ ಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನೆಲ್ಯಾಡಿ ಗ್ರಾಮದ ದೋಂತಿಲ ನಿವಾಸಿ ಸಾಯಿಬು ಬ್ಯಾರಿ ಎಂಬವರ ಪುತ್ರ ಅಬ್ದುಲ್ ಜಬ್ಬಾರ್ (51ವ) ಮೃತಪಟ್ಟವರಾಗಿದ್ದಾರೆ.
ಪೆರಿಯಶಾಂತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ
ಅಬ್ದುಲ್ ಜಬ್ಬಾರ್ ಅವರು ಜೂ.19ರಂದು ರಾತ್ರಿ ನೆಲ್ಯಾಡಿ ಯಿಂದ ರಿಕ್ಷಾದಲ್ಲಿ ಮನೆಗೆ ಹೋಗಿದ್ದು ದೋಂತಿಲ ಪಲ್ಲದಗಂಡಿ ಎಂಬಲ್ಲಿ ರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಪಡುಬೆಟ್ಟು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಜಬ್ಬಾರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಗೆ ಸ್ಪಂದಿಸದೆ ಅವರು ಜೂ.20ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೆರಿಯಶಾಂತಿಯ ಬೀದಿಬದಿ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದರು.

Leave a Reply

error: Content is protected !!