ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಯುವಕ ಸಾವು

ಶೇರ್ ಮಾಡಿ

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ.

ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!