ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ

ಶೇರ್ ಮಾಡಿ

ಕಡಬ: ಇಂದು ಉದ್ಘಾಟನೆಗೊಳ್ಳಬೇಕಿದ್ದ ಜ್ಯುವೆಲ್ಲರಿಯ ಸಿದ್ಧತೆಯಲ್ಲಿ ತೊಡಗಿದ್ದ ಕಡಬದ ಯುವಕನೋರ್ವನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.
ಅವರು ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ತೆರೆಯಲುದ್ದೇಶಿಸಿದ್ದು, ಅದು ಇಂದು (ಜೂ.22) ಶುಭಾರಂಭಗೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದ ನಾಗಪ್ರಸಾದ್ ಅವರ ಮೃತದೇಹ ಇಂದು ಬೆಳಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.
ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.

Leave a Reply

error: Content is protected !!