ಮನಸ್ಸಿನ ಭಾವನೆಗಳನ್ನು ನಿಯಂತ್ರಿಸಲು ಯೋಗ ಪೂರಕ – ಶ್ರೀಮತಿ ಶಿವಾನಿ

ಶೇರ್ ಮಾಡಿ

ಪುತ್ತೂರು: ಮನಸ್ಸಿನ ಭಾವನೆಗಳನ್ನು ನಿಯಂತ್ರಿಸಲು ಯೋಗ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಶಿವಾನಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿ ಮಾತನಾಡುತ್ತಿದ್ದರು. ಯೋಗದಿಂದ ನಮಗಾಗುವ ಮಾನಸಿಕ ದೈಹಿಕ ಪ್ರಯೋಜನಗಳನ್ನು ತಿಳಿಸಿ ಭಗವಾನ್ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ತಿಳಿಸಿದ ಕರ್ಮಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಯೋಗದಿಂದ ಅರಿಷಡ್ವರ್ಗಗಳನ್ನು ದೂರ ಮಾಡಬಹುದು ಎಂದು ಹೇಳಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ ಮಾತನಾಡಿ ಯೋಗ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿ, ಸದಾ ಆರೋಗ್ಯಕರ ಜೀವನ ನಮ್ಮದಾಗಲಿ ಎಂದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಭಾಸ್ಕರ ಗೌಡ ಮತ್ತು ಬಳಗದವರ ನೇತೃತ್ವದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಮಿತಾ ಇವರ ಮಾರ್ಗದರ್ಶನದಲ್ಲಿ 1500 ಕ್ಕಿಂತ ಅಧಿಕ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರದರ್ಶನ ನಿರ್ವಹಿಸಿದರು.

ಪ್ರಾಥಮಿಕ ಶಾಲಾ ವಿಭಾಗದ ಯೋಗ ದಿನಾಚರಣೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ಸಾಯಿಗೀತಾ ರಾವ್ ಯೋಗದ ಮಹತ್ವವನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ, ಶಿಕ್ಷಕೇತರ ವೃಂದದವರು ಸಹಕರಿಸಿದರು.

Leave a Reply

error: Content is protected !!