ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳಿ, ಮಾದಕ ವ್ಯಸನದ ದುಶ್ಚಟಗಳಿಗೆ ಬಲಿಯಾಗದಿರಿ- ಡಾ.ಶೇಷಪ್ಪ ಅಮೀನ್

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾಕೋಶ ಸಮಾಜಶಾಸ್ತ್ರ ವಿಭಾಗ ದಿನಾಂಕ 23.06.2023 ರಂದು ಯುವಜನತೆ ಹಾಗೂ ಮಾದಕ ವ್ಯಸನ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು.

ಡಾ.ಪಿ.ದಯಾನಂದ ಪೈ, ಡಾ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ ಸ್ಟ್ರೀಟ್ ಮಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕರು ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶೇಷಪ್ಪ ಅಮೀನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ವಿದ್ಯಾರ್ಥಿನಿ ಮೌಲ್ಯ ಸ್ವಾಗತಿಸಿದರು. ಪೂಜಾಶ್ರೀ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಮೊಕ್ಷಿತ ಅತಿಥಿಗಳ ಪರಿಚಯವನ್ನು ಮಂಡಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಹಾಗೂ ಉಪನ್ಯಾಸಕಿ ಶ್ರೀಮತಿ ಆರತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!