ಮಂಜುನಾಥನ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್.ರಾಹುಲ್

ಶೇರ್ ಮಾಡಿ

ಬೆಳ್ತಂಗಡಿ:ಮಂಗಳೂರು ಮೂಲದ ಕ್ರಿಕೆಟಿಗ ಕೆ.ಎಲ್.ರಾಹುಲ್ ಜೂ.25ರ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

ರಾಹುಲ್‌ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.

ಐಪಿಎಲ್‌ ವೇಳೆ ಗಾಯಗೊಂಡಿದ್ದ ಕೆ.ಎಲ್‌ ರಾಹುಲ್‌ ಬಳಿಕ ಲಂಡನ್‌ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್‌ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.

Leave a Reply

error: Content is protected !!