ಟಿವಿ ವಿಚಾರದ ಕಲಹಕ್ಕೆ ಹೊಂಡಕ್ಕೆ ಹಾರಿದ ಪತ್ನಿ; ರಕ್ಷಿಸಿಲು ಧಾವಿಸಿದ ಪತಿಯೂ ಸಾವು

ಶೇರ್ ಮಾಡಿ

ಕಾರ್ಕಳ: ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಜೂ.25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ.
ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ(40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ

ಭಾನುವಾರ ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ನೀರಿನ ಹೊಂಡಕ್ಕೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರು ಪಾಲಾದವರು ಎಂದು ತಿಳಿದು ಬಂದಿದೆ.

ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ ಪೊಲೀಸರಾದ ಪ್ರಕಾಶ್, ಸುಭಾಶ್ ಕಾಮತ್, ಸುಂದರ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!