ದ್ವಿಚಕ್ರ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ ನೆಲ್ಯಾಡಿ ಹೊರ ಠಾಣೆಯ ಪೊಲೀಸರು

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಿ ಸಿ ರೋಡ್ ನಿಂದ ಅಡ್ಡಹೊಳೆಯವರೆಗೆ ಚತುಷ್ಪದ ಕಾಮಗಾರಿ ನಡೆಯುತ್ತಿದೆ ಹಾಗೂ ಮಳೆಗಾಲ ಆರಂಭವಾಗಿದ್ದು ದ್ವಿಚಕ್ರ ವಾಹನ ಸವಾರರು ಎಲ್ಲೆಂದರಲ್ಲಿ ವಾಹನವನ್ನು ಪಾರ್ಕಿಂಗ್ ಮಾಡುವುದು, ಕೆಲವರು ವಾಹನದಲ್ಲಿ ಕೀ ಬಿಟ್ಟು ತೆರಳುತ್ತಿರುವುದರಿಂದ ವಾಹನಗಳ ಕಳ್ಳತನ ಹಾಗೂ ಕೀಗಳನ್ನು ತೆಗೆದುಕೊಂಡು ಹೋಗುವ ಪ್ರಕರಣಗಳು ಅಲ್ಲಲ್ಲಿ ಕೇಳಿ ಬರುತ್ತಿದೆ.

ಈ ಬಗ್ಗೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ದ್ವಿಚಕ್ರ ವಾಹನ ಸವಾರರಿಗೆ ವಾಹನಗಳನ್ನು ಎಲ್ಲೆಂದರಲ್ಲಿ ಮಾಲಕರು ಪಾರ್ಕಿಂಗ್ ಮಾಡದೆ, ವಾಹನದಲ್ಲಿ ಕೀಗಳನ್ನು ಇಟ್ಟು ತೆರಳದಂತೆ ಈ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ.
ವರ್ತಕರು ಅಥವಾ ಕಟ್ಟಡ ಮಾಲಕರು ಸಾಧ್ಯವಾದಷ್ಟು ಮಟ್ಟಿಗೆ ಸಿಸಿ ಕ್ಯಾಮರಗಳನ್ನು ಅಳವಡಿಸಿದ್ದಲ್ಲಿ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

Leave a Reply

error: Content is protected !!