ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ ನಿಧನ

ಶೇರ್ ಮಾಡಿ

ಉಪ್ಪಿನಂಗಡಿ: ಮಾಲೀಕ್ ಜುಮ್ಮಾ ಮಸೀದಿ ಅಧ್ಯಕ್ಷ, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ(ಜೂ.26) ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಾಮಾಜಿಕ, ಧಾರ್ಮಿಕ ಸಂಘಟನೆಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಉಪ್ಪಿನಂಗಡಿ ಗ್ರಾಪಂ ಮಾಜಿ ಸದಸ್ಯರಾಗಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ, ಪುತ್ತೂರು ತಾಲೂಕು ಜಮಾಅತ್ ಉಪಾಧ್ಯಕ್ಷರಾಗಿ, ಮಾಡನ್ನೂರು ಹುದಾ ಇಸ್ಲಾಮಿಕ್ ಅಕಾಡೆಮಿ ಉಪಾಧ್ಯಕ್ಷರಾಗಿ, ಕಮ್ಮಾಡಿ ಇಸ್ಲಾಮಿಕ್ ಸೆಂಟರ್ ನ ಉಪಾಧ್ಯಕ್ಷರಾಗಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕೇಂದ್ರ ಸಮಿತಿ ಸದಸ್ಯರಾಗಿ, ಇಂಡಿಯನ್ ಸ್ಕೂಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

error: Content is protected !!