ಆಟೋ ರಿಕ್ಷಾ ಪಲ್ಟಿ: ಚಾಲಕ ಮೃತ್ಯು

ಶೇರ್ ಮಾಡಿ

ವಿಟ್ಲ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಆಟೋ ರಿಕ್ಷಾದಲ್ಲಿ ಮಾಣಿಲ ಬಾವಲಿಮೂಲೆಗೆ ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಉರುಳಿಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪಂಜ ನಿವಾಸಿ ಸುದರ್ಶನ್ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.
ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!