ಕಡಬ: ಸುಮಾರು 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಶೇರ್ ಮಾಡಿ

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಪೊದೆಯೊಳಗೆ ಸೇರಿಕೊಂಡಿದೆ.

Leave a Reply

error: Content is protected !!