ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಕಾನೂನು ಶಿಕ್ಷಣದ ಕುರಿತು ಮಾಹಿತಿ ಕಾರ್ಯಾಗಾರ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ ಆರ್ ಮತ್ತು ಪ್ಲೇಸ್ ಮೆಂಟ್ ಘಟಕದ ವತಿಯಿಂದ ಕಾನೂನು ಶಿಕ್ಷಣ ಮತ್ತು ಕಾನೂನು ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಕಾರ್ಯಾಗಾರ ಜೂನ್ 28ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನ ಉಪನ್ಯಾಸಕರಾದ ಕುಮಾರಿ ಶ್ರೀರಕ್ಷಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕಾನೂನು ಶಿಕ್ಷಣದ ಮಹತ್ವ ಮತ್ತು ಕಾನೂನು ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಚ್ ಆರ್ ಮತ್ತು ಪ್ಲೇಸ್ ಮೆಂಟ್ ಘಟಕದ ಸಂಯೋಜಕರಾದ ಡಾ.ಪ್ರಸಾದ ಎನ್. ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಸಂಗೀತಾ ಎಸ್ ಎಂ.ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಕುಮಾರ್ ಶೇಣಿ ಸ್ವಾಗತಿಸಿ, ನಿರೂಪಿಸಿದರು.

Leave a Reply

error: Content is protected !!