ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಕೋಶದ(CET Cell) ಉದ್ಘಾಟನೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೋಶದ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಪದ ನಿಮಿತ್ತ ಕಾರ್ಯದರ್ಶಿಗಳಾದ ಡಾ.ನಿಂಗಯ್ಯ ಉದ್ಘಾಟಿಸಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಅನಿವಾರ್ಯ ವಾಗಿದೆ. ಶಿಕ್ಷಣದ ಜೊತೆ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಗಳು ಕಾಲೇಜಿನಲ್ಲಿ ನಿರಂತರವಾಗಿ ನಡೆಯಲಿ ಮತ್ತು ವಿದ್ಯಾರ್ಥಿಗಳು ಉನ್ನತ ಮಟ್ಟದ ಉದ್ಯೋಗವನ್ನು ಪಡೆಯುವಂತಾಗಲಿ ಎಂದು ಶುಭಹಾರೈಸಿದರು.
ಪಟ್ಟಣ ಪ್ರದೇಶದ ತರಬೇತಿ ಸಂಸ್ಥೆಗಳಲ್ಲಿ ದುಬಾರಿ ವೆಚ್ಚದ ಮೂರು ನಾಲ್ಕು ತಿಂಗಳ ತರಬೇತಿಗಿಂತ ಹೆಚ್ಚಿನದಾಗಿ ಕಾಲೇಜಿನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ವಿಭಾಗ ಕಾರ್ಯ ನಿರ್ವಹಿಸಲಿ, ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಯಕ್ರಮದ ಅತಿಥಿಗಳಾದ ಹರೀಶ್ ಬೆಂಗಳೂರು ವಿದ್ಯಾರ್ಥಿಗಳಿಗೆ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೋಶದ ಸಂಯೋಜಕ ಮತ್ತು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಸ್ವಾಗತಿಸಿದರು. ತರಬೇತಿ ಕೋಶದ ಉಪಸಂಯೋಜಕ ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ರಾಮ್ ಪ್ರಸಾದ್ ಧನ್ಯವಾದ ಸಮರ್ಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!