ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪಿ ಕಡಬದ ಅನೀಶ್ ರೆಹಮಾನ್ ಬಂಧನ

ಶೇರ್ ಮಾಡಿ

ಕಡಬ: ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಆರೋಪಿ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಬಂಧಿಸಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮೇ 28 ರಿಂದ ನಿರಂತರವಾಗಿ 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ, ಆತನಿಗೆ ವಿವಾಹವಾಗಿರುವ ವಿಚಾರ ತಿಳಿದು ಬಂದಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಆರೋಪಿ ಅನೀಶ್ ರೆಹಮಾನ್ ವಿರುದ್ಧ ಕಾವೂರು ಠಾಣೆಯಲ್ಲಿ NDPS ಅಡಿಯಲ್ಲೂ ಪ್ರಕರಣ ದಾಖಲಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!