ಕಾರು – ಅಟೋ ರಿಕ್ಷಾ ಢಿಕ್ಕಿ; ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಶೇರ್ ಮಾಡಿ

ಉಪ್ಪಿನಂಗಡಿ: ಅಟೋ ರಿಕ್ಷಾ ಮತ್ತು ಕಾರು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಜು.2ರಂದು ರಾತ್ರಿ ನಡೆದಿದ್ದು, ವಾಹನಗಳಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿನ ಉಪ್ಪಿನಂಗಡಿ – ಗುರುವಾಯನಕೆರೆ ರಸ್ತೆಯಲ್ಲಿ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾವೊಂದು ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!