ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಶೇರ್ ಮಾಡಿ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯಮೋನು ಎಂಬವರ ಪುತ್ರ ಜಾಫರ್(24) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೃತ ಯುವಕ ತಂದೆ, ತಾಯಿ, 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ.
ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ
.

Leave a Reply

error: Content is protected !!