ಲಾರಿ- ಕಾರು ಢಿಕ್ಕಿ; ಮಹಿಳೆ ಸಾವು, ಲಾರಿ ಚಾಲಕ ಪರಾರಿ

ಶೇರ್ ಮಾಡಿ

ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈನ್ ನ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಗೆ ತೀವ್ರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದ ಕಡೆ ಆಗಮಿಸುತ್ತಿದ್ದ ಕಾರಿಗೆ ಕುಶಾಲನಗರ ಕಡೆಯಿಂದ ಮಡಿಕೇರಿಯತ್ತ ತೆರಳುತ್ತಿದ್ದ ಲಾರಿ ಢಿಕ್ಕಿಯಾಗಿದ್ದು, ಮಹಿಳೆ ಸ್ಥಳದಲ್ಲೆ ಮೃತಪಟ್ಟರು. ಘಟನೆ ಸಂದರ್ಭ ಕಾರ್ ಮತ್ತು ಸ್ಥಳದಲ್ಲಿ ನಿಲ್ಲಿಸಿದ್ದ ಕೆಲವು ಬೈಕ್ ಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಅಪಘಾತ ನಡೆದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಸುಂಟಿಕೊಪ್ಪ ಪೊಲೀಸರು ಚಾಲಕನ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!