ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ತ್ಯಾಗರಾಜ್ ಅಮಾನತು

ಶೇರ್ ಮಾಡಿ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಕಲ್ಮಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು ಆದರೆ ಇಲಾಖೆ ಕಾನುನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್ ಅವರ ಮೇಲಿತ್ತು. ಈ ಹಿನ್ನಲೆಯಲ್ಲಿ ಇಲಾಖಾ ತನಿಖೆ ನಡೆಸಿ, ಇದೀಗ ತ್ಯಾಗರಾಜ್ ಅವರನ್ನು ಅಮಾನತುಗೊಳಿಸಿ ಆದೆಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ವಿವಾದಗಳಿಗೆ ಕಾರಣವಾಗಿದ್ದ ಕಲ್ಮಂಜದ ಅಕ್ರಮ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಲಕ್ಷಾಂತರ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ಅರಣ್ಯ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹಾಗೂ ಇತರರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆಗಲೇ ಇಲಾಖಾ ತನಿಖೆ ಆರಂಭವಾಗಿತ್ತು. ಆದರೆ ಮುಂದುವರಿದ ಭಾಗವಾಗಿ ದಾಳಿ ನಡೆಸಿದ್ದ ಸಂದ್ಯಾ ಅವರನ್ನು ಬೀದರಿಗೆ ವರ್ಗಾವಣೆ
ಮಾಡಿ ಆದೇಶ ಬಂದ ಹಿನ್ನಲೆಯಲ್ಲಿ ಭಾರೀ ರಾಜಕೀಯ ವಿವಾದಗಳು ಸೃಷ್ಟಿಯಾಗಿದ್ದವು. ಅಲ್ಲದೆ ತನಿಖೆ ನಡೆಸಿದ ಹಿರಿಯ ಅಧಿಕಾರಿಗಳು ಕೆಳ ಹಂತದ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ತ್ಯಾಗರಾಜ್ ಅವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇದೀಗ ತ್ಯಾಗರಾಜ್ ಅವರ ವಿರುದ್ದ ಇದೇ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ.


Leave a Reply

error: Content is protected !!