ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಶುಭಾರಂಭ; ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ದೀಪ ಪ್ರಜ್ವಲನೆ

ಶೇರ್ ಮಾಡಿ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಗುರುವಾರ ಪೂಜಾ ವಿಧಿ ವಿಧಾನದೊಂದಿಗೆ ಶುಭಾರಂಭಗೊಂಡಿತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ, ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಐರ್ವನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್‍.ಎನ್.ಮನ್ಮಥ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಸಂಚಾಲಕ ಎಂ.ಪಿ.ಉಮೇಶ್, ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ್ ಪಾಲ್ಗೊಂಡಿದ್ದರು.

Leave a Reply

error: Content is protected !!