ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿದ ಕಾರು; ಮಹಿಳೆ ಸಾವು

ಶೇರ್ ಮಾಡಿ

ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ಜು.6ರ ಗುರುವಾರ ನಡೆದಿದೆ.

ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಹನ(20) ಮೃತಪಟ್ಟ ಯುವತಿ. ಇವರ ಜೊತೆ ಖತೀಜಹನಳ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆ ವೈದ್ಯರನ್ನು ಭೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಹೋಗುವ ವೇಳೆ ಈ ಘಟನೆ ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಎಂಬವರು ಹೊರೆಕ್ಕೆಸೆಯಲ್ಟಿಟ್ಟಿದ್ದಾರೆ. ಗಂಭೀರ ಗಾಯಗೊಂಡ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಯಾವುದೇ ಪ್ರಯೋಜನವಾಗಿಲ್ಲ. ಅದಾಗಲೇ ಆಕೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Leave a Reply

error: Content is protected !!