ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶೇರ್ ಮಾಡಿ

ಮಂಗಳೂರು:ಕರಾವಳಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕುಂಭದ್ರೋಣ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜು.7 ಶುಕ್ರವಾರವೂ ರಜೆ ಘೋಷಿಸಲಾಗಿದೆ
ಕೇಂದ್ರ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಬುಧವಾರ, ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಕರಾವಳಿಯಾಧ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ. ಪ್ರವಾಸಿಗರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.
ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

ಈಗ ನೀಡಿದ ರಜೆಯನ್ನು ಶನಿವಾರ ಪೂರ್ಣ ದಿನ ಅಥವಾ ಭಾನುವಾರ ತರಗತಿಗಳನ್ನು ನಡೆಸಿ ಸರಿದೊಗಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.

Leave a Reply

error: Content is protected !!