ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಸರ್ಕಾರ; ಅಬಕಾರಿ ತೆರಿಗೆ ಹೆಚ್ಚಳ

ಶೇರ್ ಮಾಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರ ಮಂಡಿಸಿದರು. ದಾಖಲೆಯ 14ನೇ ಬಜೆಟ್ ಓದಿದ ಸಿದ್ದರಾಮಯ್ಯ ಅವರು ಬೊಕ್ಕಸ ಹೆಚ್ಚಳಕ್ಕಾಗಿ ಮದ್ಯಪ್ರಿಯರಿಗೆ ಶಾಕ್ ನೀಡಿದ್ದಾರೆ.

ನಿರೀಕ್ಷೆಯಂತೆ ಅಬಕಾರಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20ರಷ್ಟು ಹೆಚ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದೇ ವೇಳೆ ಬಿಯರ್ ದರವನ್ನು ಶೇಕಡಾ ಹತ್ತರಷ್ಟು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಿರುವ ಸಿದ್ದರಾಮಯ್ಯ ಸರ್ಕಾರವು ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ ಆದಾಯ ಟಾರ್ಗೆಟ್ ನೀಡಲಾಗಿದೆ.

Leave a Reply

error: Content is protected !!