ಮಹಿಳೆ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ

ಶೇರ್ ಮಾಡಿ

ವಿಟ್ಲ: ಮಹಿಳೆಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಇಂದು ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ(41) ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!