ಆ.1ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಶೇರ್ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆ.1ರಂದು ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ ಹಾಗೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಆಗಸ್ಟ್ 1 ರಂದು ಲೋಕಮಾನ್ಯ ತಿಲಕರ 103ನೇ ಪುಣ್ಯಸ್ಮರಣೆಯಂದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯ ಏಣಿಯನ್ನು ಏರಿದೆ. ಮಾತ್ರವಲ್ಲದೆ ಪ್ರಧಾನಿ ಅವರ ಮಹತ್ವದ ನಾಯಕತ್ವದ ಮೂಲಕ ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವಲ್ಲಿ ಶ್ರಮಿಸಿರುವುದನ್ನು ಶ್ಲಾಘಿಸಿ ಅವರಿಗೆ ಲೋಕಮಾನ್ಯ ತಿಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಹೇಳಿದರು.

Leave a Reply

error: Content is protected !!